ವಿಜಯ್‌ ಕಾರ್ತಿಕೇಯ ನಿರ್ದೇಶನದ ಬಹುನಿರೀಕ್ಷಿತ ‘ಮ್ಯಾಕ್ಸ್‌’ ಸಿನಿಮಾದ ಟೀಸರ್‌ ಬಿಡುಗಡೆಯಾಗಿದೆ. ಸುದೀಪ್‌ ನಟನೆಯ PAN ಇಂಡಿಯಾ ಚಿತ್ರವಿದು. ಭರ್ಜರಿ ಆಕ್ಷನ್‌ ಸನ್ನಿವೇಶಗಳಿರುವ ಸೂಚನೆ ಸಿಕ್ಕಿದ್ದು, ಸುದೀಪ್‌ ಮಾಸ್‌ ಇಮೇಜ್‌ನಲ್ಲಿ ಕಾಣಿಸಿಕೊಂಡಿದ್ದಾರೆ.

ಸುದೀಪ್‌ ನಟನೆಯ ಬಹುನಿರೀಕ್ಷಿತ ‘ಮ್ಯಾಕ್ಸ್‌’ ಸಿನಿಮಾದ ಟೀಸರ್‌ ರಿಲೀಸ್‌ ಆಗಿದೆ. ಟೀಸರ್‌ ರಿಲೀಸ್‌ ಬಗ್ಗೆ ಚಿತ್ರತಂಡ ದೊಡ್ಡ ಸುದ್ದಿಯನ್ನೇನೂ ಮಾಡಿರಲಿಲ್ಲ. ಸದ್ದಿಲ್ಲದೆ ಬಿಡುಗಡೆಯಾದ ಟೀಸರ್‌ ಮೇಕಿಂಗ್‌ನಿಂದ ಗಮನ ಸೆಳೆಯುತ್ತದೆ. ಚಿತ್ರದಲ್ಲಿ ಭರ್ಜರಿ ಆಕ್ಷನ್‌ ಸೀನ್‌ಗಳು ಇರಲಿವೆ ಎನ್ನುವ ಸುಳಿವು ಸಿಗುತ್ತದೆ. ತಮಿಳು ನಟಿ ವರಲಕ್ಷ್ಮಿ ಶರತ್‌ ಕುಮಾರ್‌, ತೆಲುಗು ನಟ ಸುನೀಲ್‌, ಕನ್ನಡದ ಶರತ್‌ ಲೋಹಿತಾಶ್ವ, ಪ್ರಮೋದ್‌ ಶೆಟ್ಟಿ ಮತ್ತಿತರರ ಪಾತ್ರಗಳು ಟೀಸರ್‌ನಲ್ಲಿ ಪರಿಚಯವಾಗಿವೆ. ಮಾಸ್‌ ಅವತಾರದಲ್ಲಿನ ಸುದೀಪ್‌ ಲುಕ್‌ ಅವರ ಅಭಿಮಾನಿಗಳಿಗೆ ಇಷ್ಟವಾಗಿದ್ದು, ಸಿನಿಮಾ ಕುರಿತ ನಿರೀಕ್ಷೆ ಹೆಚ್ಚಿಸಿದೆ. ವಿಜಯ್ ಕಾರ್ತಿಕೇಯ ನಿರ್ದೇಶನದ ಆಕ್ಷನ್ – ಥ್ರಿಲ್ಲರ್ ಚಿತ್ರಕ್ಕೆ ಅಜನೀಶ್ ಲೋಕನಾಥ್ ಸಂಗೀತ ಸಂಯೋಜನೆ ಮಾಡಿದ್ದಾರೆ. ಕಲೈಪುಲಿ ಎಸ್ ತನು ವಿ‌ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ಹಾಗೂ ಕಿಚ್ಚ ಸುದೀಪ್ ಕಿಚ್ಚ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ಚಿತ್ರ ನಿರ್ಮಾಣವಾಗಿದೆ.

LEAVE A REPLY

Connect with

Please enter your comment!
Please enter your name here