ರಂಜಿತ್‌ ಸಿಂಗ್‌ ರಜಪೂತ್‌ ನಿರ್ದೇಶನದ ‘ಸಪ್ಲೇಯರ್‌ ಶಂಕರ’ ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆಯಾಗಿದೆ. ನಿಶ್ಚಿತ್‌ ಕರೋಡಿ ಮತ್ತು ದೀಪಿಕಾ ಆರಾಧ್ಯ ಚಿತ್ರದ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

‘ಗಂಟು ಮೂಟೆ’ ಮತ್ತು ‘ಟಾಮ್ & ಜರ್ರಿ’ ಖ್ಯಾತಿಯ ನಿಶ್ಚಿತ್ ಕರೋಡಿ ನಾಯಕನಾಗಿ ನಟಿಸಿರುವ ಬಹುನಿರೀಕ್ಷಿತ ‘ಸಪ್ಲೇಯರ್ ಶಂಕರ’ ಚಿತ್ರ ಬಿಡುಗಡೆಗೆ ಸಿದ್ದವಾಗಿದೆ. ಆನಂದ್ ಆಡಿಯೋ ಮೂಲಕ ಟೀಸರ್ ಹಾಗೂ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಚಿತ್ರತಂಡ ಬಿಡುಗಡೆ ದಿನಾಂಕ ಘೋಷಿಸಿದೆ. ಫೆಬ್ರವರಿ 2ರಂದು ಸಿನಿಮಾ ತೆರೆಕಾಣಲಿದೆ. ಸಿನಿಮಾವನ್ನು ರಂಜಿತ್ ಸಿಂಗ್‌ ರಜಪೂತ್ ನಿರ್ದೇಶಿಸಿದ್ದಾರೆ. ಮರ್ಡರ್ ಮಿಸ್ಟರಿ ಕಥಾಹಂದರ ಹೊಂದಿರುವ ಚಿತ್ರಕ್ಕೆ ನಿರ್ದೇಶಕ ರಂಜಿತ್ ಅವರೇ ಕತೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದಾರೆ.

ಚಲನಚಿತ್ರವು ಬಾರ್ ಸಪ್ಲೇಯರ್ ಒಬ್ಬನ ಸುತ್ತ ನಡೆಯುವ ಕತೆಯಾಗಿದೆ. ದೀಪಿಕಾ ಆರಾಧ್ಯ ಈ ಚಿತ್ರದ ನಾಯಕಿ. ಗೋಪಾಲಕೃಷ್ಣ ದೇಶಪಾಂಡೆ, ನವೀನ್ ಪಡೀಲ್, ಜ್ಯೋತಿ ರೈ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಸತೀಶ್ ಕುಮಾರ್ ಛಾಯಾಗ್ರಹಣ, ಸತೀಶ್ ಚಂದ್ರಯ್ಯ ಸಂಕಲನ, ಬಾಲಾಜಿ ಕಲಾ ನಿರ್ದೇಶನ ಚಿತ್ರಕ್ಕಿದೆ. ಈ ಸಿನಿಮಾವನ್ನು Thrinetra Films ಬ್ಯಾನರ್‌ ಅಡಿಯಲ್ಲಿ ಎಂ ಚಂದ್ರಶೇಖರ್ ಹಾಗೂ ಎಂ ನಾಗೇಂದ್ರ ಸಿಂಗ್ ನಿರ್ಮಿಸಿದ್ದಾರೆ.

LEAVE A REPLY

Connect with

Please enter your comment!
Please enter your name here