‘ಸ್ವಾತಿ ಮುತ್ತಿನ ಮಳೆ ಹನಿಯೇ’ ಚಿತ್ರದ ಮೊದಲ ಹಾಡು ಬಿಡುಗಡೆಯಾಗಿದೆ. ಪೃಥ್ವಿ ರಚನೆಯ ಈ ಹಾಡಿಗೆ ಮಿಥುನ್‌ ಮುಕುಂದನ್‌ ಸಂಗೀತ ಸಂಯೋಜಿಸಿದ್ದು, ಮಾಧುರಿ ಶೇಷಾದ್ರಿ ಹಾಡಿದ್ದಾರೆ.

ರಾಜ್‌ ಬಿ ಶೆಟ್ಟಿ ಮುಖ್ಯಭೂಮಿಕೆಯಲ್ಲಿ ಅಭಿನಯಿಸಿರುವ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಚಿತ್ರದ ಮೊದಲ ಹಾಡು ಬಿಡುಗಡೆಯಾಗಿದೆ. ‘ಮೆಲ್ಲಗೆ’ ಶೀರ್ಷಿಕೆಯ ಈ ಮೆಲೋಡಿ ಹಾಡು ಕೇಳಲು ಸೊಗಸಾಗಿದೆ. ಇದು ಕನ್ನಡ ಚಿತ್ರರಂಗದಲ್ಲೀಗ ಗಮನ ಸೆಳೆಯುತ್ತಿರುವ ಹೊಸ ಸಿನಿಮಾ ಅಲ್ಲದೇ, ರಾಜ್ ಬಿ ಶೆಟ್ಟಿ ನಟನೆಯ ಬಹುನಿರೀಕ್ಷಿತ ಪ್ರೇಮಕತೆ ಆಧಾರಿತ ಸಿನಿಮಾ. ರಾಜ್ ಬಿ ಶೆಟ್ಟಿ ಅವರೇ ಕಥೆ, ಚಿತ್ರಕಥೆ ಬರೆದು ಸಿನಿಮಾ ನಿರ್ದೇಶಿಸಿದ್ದಾರೆ. ಹಾಡಿಗೆ ಮಿಥುನ್ ಮುಕುಂದನ್ ಸಂಗೀತ ಸಂಯೋಜಿಸಿದ್ದು, ಮಾಧುರಿ ಶೇಷಾದ್ರಿ ಹಾಡಿದ್ದಾರೆ. ಮಂಗಳೂರಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಪೃಥ್ವಿ ಎಂಬುವವರು ಈ ಹಾಡು ಬರೆದಿದ್ದಾರೆ.

‘ಇದು ಪ್ರೀತಿಯ ಕುರಿತಾಗಿ ಒಬ್ಬ ಮಹಿಳೆಯ ದೃಷ್ಟಿಕೋನದ ಹಾಡು, ಪ್ರೀತಿಯನ್ನು ಮಹಿಳೆಯರು ಹೇಗೆ ಅನುಭವಿಸುತ್ತಾರೆ ಎನ್ನುವುದು ಬೇಕಾಗಿತ್ತು. ಹಾಗಾಗಿ ಪೃಥ್ವಿ ಅವರಿಂದಲೇ ಬರೆಸಿದೆ’ ಎಂದು ರಾಜ್ ಬಿ ಶೆಟ್ಟಿ ಮಾಹಿತಿ ಹಂಚಿಕೊಂಡಿದ್ದಾರೆ. ಚಿತ್ರದ ಹಾಡಿನಲ್ಲಿ ರಾಜ್ ಬಿ ಶೆಟ್ಟಿ ಮತ್ತು ಸಿರಿ ಜೊತೆಗೆ ಬಾಲಾಜಿ ಮನೋಹರ್, ಸೂರ್ಯ ವಸಿಷ್ಠ, ರೇಖಾ ಕೂಡ್ಲಿಗಿ, ಸ್ನೇಹ ಶರ್ಮಾ ಸೇರಿದಂತೆ ಹಲವರು ಕಾಣಿಸಿಕೊಂಡಿದ್ದಾರೆ. Lighter Buddha Films ಸಹಯೋಗದೊಂದಿಗೆ AppleBox Studios ಬ್ಯಾನರ್‌ ಅಡಿಯಲ್ಲಿ ನಟಿ ರಮ್ಯ ಅವರು ಸಿನಿಮಾ ನಿರ್ಮಿಸಿದ್ದಾರೆ. ಪ್ರವೀಣ್ ಶ್ರೀಯಾನ್ ಛಾಯಾಗ್ರಹಣ ಚಿತ್ರಕ್ಕಿದೆ. ನವೆಂಬರ್ 24, 2023ರಂದು ಸಿನಿಮಾ ತೆರೆಕಾಣಲಿದೆ.

LEAVE A REPLY

Connect with

Please enter your comment!
Please enter your name here