ಕಿರುತೆರೆ ಕಲಾವಿದರ ‘ಟೆಲಿವಿಷನ್ ಕ್ರಿಕೆಟ್ ಲೀಗ್’ ಮೂರನೇ ಸೀಸನ್‌ ಡಿಸೆಂಬರ್‌ನಲ್ಲಿ ನಡೆಯಲಿದೆ.  ಕ್ರೇಜಿ ಕಿಲ್ಲರ್ಸ್, ಗ್ಯಾಂಗ್ ಗರುಡಾಸ್, ಗ್ರೌಂಡ್ ಹಂಟರ್ಸ್, ಜಟಾಯು ಜೈಂಟ್ಸ್, ಕಿಂಗ್ ಕೇಸರಿಸ್, ಸರ್ಪ ಸ್ಟ್ರೈಕರ್ ಶೀರ್ಷಿಕೆಯ ಆರು ತಂಡಗಳು ಸ್ಪರ್ಧಿಸಲಿವೆ.

ಕಿರುತೆರೆ ಕಲಾವಿದರೆಲ್ಲರೂ ಸೇರುವುದೇ ಒಂದು ವಿಶೇಷ ಸಂದರ್ಭ. ಇಂಥದ್ದೊಂದು ಸಂದರ್ಭಕ್ಕೆ ಟೆಲಿವಿಷನ್ ಕ್ರಿಕೆಟ್ ಲೀಗ್ ಸಾಕ್ಷಿಯಾಗುತ್ತಿದೆ. ಬರುವ ಡಿಸೆಂಬರ್ ಎರಡನೇ ವಾರದಿಂದ ಕಿರುತೆರೆ ಕಲಾವಿದರ ಕ್ರಿಕೆಟ್ ಹಂಗಾಮ ಶುರುವಾಗಲಿದೆ. ವಾಸವಿ ವೆಂಚರ್ಸ್ ಸಂಸ್ಥೆ ಸಹಯೋಗದಲ್ಲಿ ‘ಟೆಲಿವಿಷನ್ ಕ್ರಿಕೆಟ್ ಲೀಗ್’ ನಡೆಯಲಿದ್ದು, ಇದರಲ್ಲಿ ಕಿರುತೆರೆ ಕಲಾವಿದರು ಭಾಗವಹಿಸಲಿದ್ದಾರೆ. ಟಿಸಿಎಲ್‌ ತಂಡಗಳು ಈಗಾಗಲೇ ಅಭ್ಯಾಸದಲ್ಲಿ ತೊಡಗಿವೆ. ಈ ಪಂದ್ಯಾವಳಿಯಲ್ಲಿ ಕ್ರೇಜಿ ಕಿಲ್ಲರ್ಸ್, ಗ್ಯಾಂಗ್ ಗರುಡಾಸ್, ಗ್ರೌಂಡ್ ಹಂಟರ್ಸ್, ಜಟಾಯು ಜೈಂಟ್ಸ್, ಕಿಂಗ್ ಕೇಸರಿಸ್, ಸರ್ಪ ಸ್ಟ್ರೈಕರ್ ಎಂಬ 6 ತಂಡಗಳಿರಲಿದ್ದು, ಕಿರುತರೆ ನಟ-ನಟಿಯರು ಭಾಗವಹಿಸಲಿದ್ದಾರೆ.

ದೀಪಕ್ ಹಾಗೂ ಮಂಜೇಶ್ ಸಾರಥ್ಯದಲ್ಲಿ ನಡೆಯುತ್ತಿರುವ ಕಿರುತೆರೆ ಕಲಾವಿದರ ಕ್ರಿಕೆಟ್ ಪಂದ್ಯಾವಳಿ ಬರೋಬ್ಬರಿ‌ 102 ಸೆಲೆಬ್ರಿಟಿಗಳು ಭಾಗಿಯಾಗಲಿದ್ದಾರೆ. ಈಗಾಗಲೇ ಎರಡು ಸೀಸನ್ಸ್ ಯಶಸ್ವಿಯಾಗಿ ಪೂರೈಸಿರುವ ಟಿಸಿಎಲ್, ಮೂರನೇ ಸೀಸನ್ ಪಂದ್ಯಾವಳಿಗೆ ಸಜ್ಜಾಗಿದೆ. ಈ ಬಗ್ಗೆ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಸ್ಟರ್ ಆನಂದ್, ಬಿಗ್ ಬಾಸ್ ಮಂಜು ಪಾವಗಡ, ಸಂಸ್ಥಾಪಕ ದೀಪಕ್, ಸಹ ಸಂಸ್ಥಾಪಕರಾದ ಮಂಜೇಶ್ ಮತ್ತು ವೈ ವಿ ಕಾರ್ತಿಕ್ ಸೇರಿದಂತೆ ಹಲವು‌ ಕಿರುತೆರೆ ಕಲಾವಿದರು ಭಾಗಿಯಾಗಿದ್ದರು.

Previous article‘ಭಜರಂಗಿ 2’ ವೃತ್ತಿ ಬದುಕಿನ ಸ್ಪೆಷಲ್ ಸಿನಿಮಾ: ಶಿವರಾಜಕುಮಾರ್
Next articleಡಬ್ಬಿಂಗ್ ಮುಗಿಸಿದ ‘ವರದ’; ವಿನೋದ್ ಪ್ರಭಾಕರ್ ಆಕ್ಷನ್ ಸಿನಿಮಾ

LEAVE A REPLY

Connect with

Please enter your comment!
Please enter your name here