ರವಿಚಂದ್ರನ್‌ ಅಭಿನಯದ ‘ದ ಜಡ್ಜ್‌ಮೆಂಟ್‌’ ಸಿನಿಮಾದ ಡಬ್ಬಿಂಗ್‌ ಶುರುವಾಗಿದೆ. ಗುರುರಾಜ ಕುಲಕರ್ಣಿ ನಿರ್ದೇಶನದ ಚಿತ್ರದ ಇತರೆ ಪ್ರಮುಖ ಪಾತ್ರಗಳಲ್ಲಿ ವಿ ರವಿಚಂದ್ರನ್‌, ದಿಗಂತ್‌ ಮಂಚಾಲೆ, ಮೇಘನಾ ಗಾಂವ್ಕರ್‌, ಧನ್ಯಾ ರಾಮಕುಮಾರ್‌ ಇದ್ದಾರೆ.

ಗುರುರಾಜ ಕುಲಕರ್ಣಿ (ನಾಡಗೌಡ) ನಿರ್ದೇಶಿಸಿರುವ ‘ದ ಜಡ್ಜ್‌ಮೆಂಟ್’ ಚಿತ್ರದ ಡಬ್ಬಿಂಗ್‌ ಕಾರ್ಯಗಳು ಆರಂಭವಾಗಿವೆ. ಈ ಕೋರ್ಟ್‌ – ಡ್ರಾಮಾದಲ್ಲಿ ವಿ ರವಿಚಂದ್ರನ್‌, ದಿಗಂತ್‌ ಮಂಚಾಲೆ, ಮೇಘನಾ ಗಾಂವ್ಕರ್‌, ಧನ್ಯಾ ರಾಮಕುಮಾರ್‌ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. G9 Communication Media & Entertainment ಬ್ಯಾನರ್‌ ಅಡಿಯಲ್ಲಿ ಶಾರದ ನಾಡಗೌಡ, ವಿಶ್ವನಾಥ ಗುಪ್ತ, ರಾಮು ರಾಯಚೂರು, ರಾಜಶೇಖರ ಪಾಟೀಲ ಮತ್ತು ಪ್ರತಿಮ ಬಿರಾದಾರ ಈ ಸಿನಿಮಾ ನಿರ್ಮಿಸುತ್ತಿದ್ದಾರೆ. ಚಿತ್ರದ ಬಹುತೇಕ ಚಿತ್ರೀಕರಣ ಮುಕ್ತಾಯವಾಗಿದ್ದು, ಒಂದು ಹಾಡಿನ ಚಿತ್ರೀಕರಣ ಬಾಕಿಯಿದೆ.

ಸಿನಿಮಾದಲ್ಲಿ ಲಕ್ಷ್ಮೀ ಗೋಪಾಲಸ್ವಾಮಿ, ಪ್ರಕಾಶ ಬೆಳವಾಡಿ, ಟಿ ಎಸ್ ನಾಗಾಭರಣ, ಕೃಷ್ಣಾ ಹೆಬ್ಬಾಳೆ, ರಂಗಾಯಣ ರಘು, ರಾಜೇಂದ್ರ ಕಾರಂತ, ರವಿಶಂಕರ ಗೌಡ, ಸುಜಯ ಶಾಸ್ತ್ರೀ, ರೇಖಾ ಕೂಡ್ಲಿಗಿ, ರೂಪಾ ರಾಯಪ್ಪ, ಪ್ರೀತಂ, ಅಶ್ವಿನ್ ರಾವ್ ಇತರೆ ಪ್ರಮುಖ ಪಾತ್ರಗಳಲ್ಲಿದ್ದಾರೆ. ಎಂ ಎಸ್ ರಮೇಶ್ ಸಂಭಾಷಣೆ ಬರೆದಿದ್ದು, ಪ್ರಮೋದ್ ಮರವಂತೆ ಹಾಡುಗಳನ್ನು ರಚಿಸಿದ್ದಾರೆ. ಅನೂಪ ಸೀಳಿನ್ ಸಂಗೀತ ಸಂಯೋಜಿಸಿದ್ದಾರೆ. ಪಿ ಕೆ‌ ಹೆಚ್ ದಾಸ್ ಛಾಯಾಗ್ರಹಣ, ಕೆಂಪರಾಜ್ ಬಿ ಎಸ್ ಸಂಕಲನವಿರುವ ಈ ಚಲನಚಿತ್ರದ ಸ್ಕ್ರಿಪ್ಟ್ ಸೂಪರ್ ವೈಸರ್ ಆಗಿ ಪಿ ವಾಸುದೇವ ಮೂರ್ತಿ ಕಾರ್ಯನಿರ್ವಹಿಸಿದ್ದಾರೆ.

LEAVE A REPLY

Connect with

Please enter your comment!
Please enter your name here