ಟೊವಿನೋ ಥಾಮಸ್‌ ನಟನೆಯ ‘ARM’ ಮಲಯಾಳಂ 3D ಫ್ಯಾಂಟಸಿ ಸಿನಿಮಾ ಸೆಪ್ಟೆಂಬರ್‌ 12ರಂದು ತೆರೆಕಾಣುತ್ತಿದೆ. ಜಿತಿನ್‌ ಲಾಲ್‌ ನಿರ್ದೇಶನದ ಚಿತ್ರದ ಪ್ರಮುಖ ಪಾತ್ರಗಳಲ್ಲಿ ಕೃತಿ ಶೆಟ್ಟಿ, ಐಶ್ವರ್ಯ ರಾಜೇಶ್ ಮತ್ತು ಸುರಭಿ ಲಕ್ಷ್ಮಿ ನಟಿಸಿದ್ದಾರೆ. ಕನ್ನಡದಲ್ಲಿ ಚಿತ್ರವನ್ನು ಹೊಂಬಾಳೆ ಫಿಲಂಸ್‌ ಬಿಡುಗಡೆ ಮಾಡುತ್ತಿದೆ.

ಜಿತಿನ್‌ ಲಾಲ್‌ ನಿರ್ದೇಶನದಲ್ಲಿ ಟೊವಿನೋ ಥಾಮಸ್‌ ನಟಿಸಿರುವ ‘ARM’ PAN ಇಂಡಿಯಾ ಚಿತ್ರವನ್ನು ಕರ್ನಾಟಕದಲ್ಲಿ ಹೊಂಬಾಳೆ ಫಿಲಂಸ್‌ ರಿಲೀಸ್‌ ಮಾಡುತ್ತಿದೆ. ಟೊವಿನೋ ಥಾಮಸ್‌, ಕೃತಿ ಶೆಟ್ಟಿ, ಐಶ್ವರ್ಯ ರಾಜೇಶ್‌ ಮತ್ತು ಸುರಭಿ ಲಕ್ಷ್ಮಿ ಚಿತ್ರದ ಪ್ರಮುಖ ಪಾತ್ರಗಳಲ್ಲಿದ್ದಾರೆ. ಮ್ಯಾಜಿಕ್ ಫ್ರೇಮ್ಸ್ ಬ್ಯಾನರ್ ಅಡಿಯಲ್ಲಿ ಲಿಸ್ಟಿನ್ ಸ್ಟೀಫನ್ ಮತ್ತು UGM ಮೂವೀಸ್ ಅಡಿಯಲ್ಲಿ ಡಾ ಜಕರಿಯಾ ಥಾಮಸ್ ನಿರ್ಮಿಸಿರುವ 3D ಫ್ಯಾಂಟಸಿ ಚಿತ್ರವಿದು. ಐದು ಭಾಷೆಗಳಲ್ಲಿ ಸಿನಿಮಾ ರಿಲೀಸ್‌ ಆಗುತ್ತಿದೆ. ಮಲಯಾಳಂ ಮಾತ್ರವಲ್ಲದೆ ಬಾಲಿವುಡ್‌ನಲ್ಲೂ ಛಾಪು ಮೂಡಿಸಿರುವ ಜೋಮನ್ ಟಿ ಜಾನ್ ಛಾಯಾಗ್ರಹಣ ಮತ್ತು ಶಮೀರ್ ಮುಹಮ್ಮದ್ ಅವರ ಸಂಕಲನ ಚಿತ್ರಕ್ಕಿದೆ.

ದಿಬು ನೈನನ್ ಥಾಮಸ್ ಈ ಚಿತ್ರಕ್ಕೆ ಸಂಗೀತ ಸಂಯೋಜಿಸಿದ್ದಾರೆ. ಈ ಹಿಂದೆ ‘ಕನಾ’ ಮತ್ತು ನಟ ಸಿದ್ಧಾರ್ಥ್‌ ಅವರ ‘ಚಿತ್ತಾ’ ಸಿನಿಮಾಗಳಿಗೆ ಅವರು ಸಂಗೀತ ನೀಡಿದ್ದರು. ಬೇಸಿಲ್ ಜೋಸೆಫ್, ಜಗದೀಶ್, ಹರೀಶ್ ಉತ್ತಮನ್, ಹರೀಶ್ ಪೆರಾಡಿ, ಕಬೀರ್ ಸಿಂಗ್, ಪ್ರಮೋದ್ ಶೆಟ್ಟಿ ಮತ್ತು ರೋಹಿಣಿ ಚಿತ್ರದ ಇತರೆ ಪಾತ್ರಗಲ್ಲಿ ನಟಿಸಿದ್ದಾರೆ. ಸುಜಿತ್ ನಂಬಿಯಾರ್ ಮತ್ತು ದೀಪು ಪ್ರದೀಪ್‌ ಕತೆ ರಚಿಸಿದ್ದು, ವಿಕ್ರಮ್ ಮೋರ್, ಫೀನಿಕ್ಸ್ ಪ್ರಭು ಸಾಹಸ ನಿರ್ದೇಶನ ಮಾಡಿದ್ದಾರೆ. ಚಿತ್ರವೂ ಸೆಪ್ಟೆಂಬರ್ 12ರಂದು ಬಿಡುಗಡೆಯಾಗುತ್ತಿದೆ. ಕನ್ನಡದಲ್ಲಿ ಹೊಂಬಾಳೆ ಫಿಲಂಸ್‌, ತೆಲುಗಿನಲ್ಲಿ ಮೈತ್ರಿ ಮೂವಿ ಮೇಕರ್ಸ್‌ ಮತ್ತು ಹಿಂದಿಯಲ್ಲಿ ಅನಿಲ್ ಥಡಾನಿ ಚಿತ್ರವನ್ನು ವಿತರಣೆ ಮಾಡುತ್ತಿದ್ದಾರೆ.

LEAVE A REPLY

Connect with

Please enter your comment!
Please enter your name here