ರಘು ಶಾಸ್ತ್ರಿ ನಿರ್ದೇಶನದ ‘ಲೈನ್ ಮ್ಯಾನ್’ ಸಿನಿಮಾದ ಮೋಷನ್‌ ಪೋಸ್ಟರ್‌ ಬಿಡುಗಡೆಯಾಗಿದೆ. ತ್ರಿಗುಣ್‌ ಹೀರೋ ಆಗಿ ನಟಿಸಿರುವ ಚಿತ್ರದ ನಾಯಕಿ ಕಾಜಲ್‌ ಕುಂದರ್‌. ಲೈನ್‌ಮ್ಯಾನ್‌ ಒಬ್ಬನ ಬದುಕಿನ ಕತೆ ಹೇಳುವ ಕಥಾವಸ್ತು. ಮಾರ್ಚ್‌ 15ರಂದು ಸಿನಿಮಾ ತೆರೆಕಾಣಲಿದೆ.

‘ರನ್ ಆಂಟೋನಿ’, ‘ಟಕ್ಕರ್’ ಚಿತ್ರಗಳನ್ನು ನಿರ್ದೇಶಿಸಿದ್ದ ರಘು ಶಾಸ್ತ್ರಿ ಮತ್ತೊಂದು ವಿಭಿನ್ನ ಸಿನಿಮಾದೊಂದಿಗೆ ಬರುತ್ತಿದ್ದಾರೆ. ಈ ಚಿತ್ರಕ್ಕೆ ‘ಲೈನ್ ಮ್ಯಾನ್’ ಎಂಬ ಶೀರ್ಷಿಕೆ ಇಡಲಾಗಿದ್ದು, ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆಯಾಗಿದೆ. ಗ್ರಾಮೀಣ ಹಿನ್ನೆಲೆಯ ಕಥಾವಸ್ತು ಎನ್ನುವುದು ತಿಳಿದುಬರುತ್ತದೆ. ಚಿತ್ರಕ್ಕೆ ಕದ್ರಿ ಮಣಿಕಾಂತ್ ಸಂಗೀತವಿದೆ. ಯುವನಟ ತ್ರಿಗುಣ್ ‘ಲೈನ್ ಮ್ಯಾನ್’ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಖ್ಯಾತ ನಿರ್ದೇಶಕ ರಾಮ್‌ ಗೋಪಾಲ್‌ ವರ್ಮ ಅವರ ‘ಕೊಂಡ’ ಚಿತ್ರ ಸೇರಿದಂತೆ ಕೆಲ ಸಿನಿಮಾಗಳಲ್ಲಿ ನಟಿಸಿರುವ ತ್ರಿಗುಣ್ ನಾಯಕನಟನಾಗಿ ನಟಿಸುತ್ತಿರುವ ಚೊಚ್ಚಲ ಚಿತ್ರವಿದು. ಕಾಜಲ್ ಕುಂದರ್ ನಾಯಕಿಯಾಗಿ ಅಭಿನಯಿಸಿದ್ದು, ಹಿರಿಯ ನಟಿ ಬಿ ಜಯಶ್ರೀ, ಮೈಕೋ ನಾಗರಾಜ್, ಹರಿಣಿ, ಅಂಜಲಿ, ಅಪೂರ್ವಶ್ರೀ ಇತರೆ ಪ್ರಮುಖ ಪಾತ್ರಗಳಲ್ಲಿದ್ದಾರೆ.

ವಿದ್ಯುತ್‌ಗೆ ಸಂಬಂಧಿಸಿದ ಕೆಲಸ, ತೊಂದರೆ ಸರಿಪಡಿಸುವ ‘ಲೈನ್ ಮ್ಯಾನ್’ ಬದುಕಿನ ಸುತ್ತ ಈ ಕಥೆ ಸುತ್ತುತ್ತದೆ. ‘ಭಿನ್ನ’, ‘ಡಿಯರ್ ಸತ್ಯ’ ಸಿನಿಮಾಗಳನ್ನು ನಿರ್ಮಿಸಿರುವ Purple Rock ಸಂಸ್ಥೆಯ ಮೂರನೇ ಚಿತ್ರ ಇದಾಗಿದ್ದು, ಯತೀಶ್ ವೆಂಕಟೇಶ್, ಗಣೇಶ್ ಪಾಪಣ್ಣ, ಶ್ರೀನಿವಾಸ್ ಬಿಂಡಿಗನವಿಲೆ ಹಾಗೂ ಅಜಯ್ ಅಪರೂಪ್ ಸೇರಿ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಚಿತ್ರದಲ್ಲಿ ಮೂರು ಹಾಡುಗಳಿದ್ದು, ಮಣಿಕಾಂತ್ ಕದ್ರಿ ಸಂಗೀತ ನೀಡಿದ್ದಾರೆ. ಶಾಂತಿ ಸಾಗರ್ ಛಾಯಾಗ್ರಹಣವಿದೆ. ಪ್ರಚುರ ಪಿ ಪಿ, ಜ್ಯೋತಿ ರಘು ಶಾಸ್ತ್ರೀ ಹಾಗೂ ಮಣಿಕಾಂತ್ ಕದ್ರಿ ಚಿತ್ರದ ಸಹನಿರ್ಮಾಪಕರು. ಚಾಮರಾಜನಗರದ ಚಂದಕವಾಡಿಯಲ್ಲಿ ಚಿತ್ರೀಕರಣ ನಡೆಸಲಾಗಿದ್ದು, ಕನ್ನಡ ಹಾಗೂ ತೆಲುಗು ಸೇರಿ ಎರಡು ಭಾಷೆಗಳಲ್ಲಿ ಚಿತ್ರ ತಯಾರಾಗಿದೆ. ಸೆನ್ಸಾರ್ ಪಾಸಾಗಿರುವ ಸಿನಿಮಾ ಮಾರ್ಚ್ 15ಕ್ಕೆ ರಾಜ್ಯಾದ್ಯಂತ ಬಿಡುಗಡೆಯಾಗಲಿದೆ.

LEAVE A REPLY

Connect with

Please enter your comment!
Please enter your name here