ನಟ, ನಿರ್ದೇಶಕ ಉಪೇಂದ್ರ ಅವರು ಆಗಿಂದಾಗ್ಗೆ ಸಿನಿಮಾಗಳಿಗೆ ಹಾಡುವುದಿದೆ. ಸತೀಶ್ ರಾಜ್ ನಿರ್ದೇಶನದ ‘ಹುಷಾರ್’ ಸಿನಿಮಾದ ಹಾಡೊಂದಕ್ಕೆ ಅವರು ದನಿಯಾಗಿದ್ದಾರೆ. ಏಪ್ರಿಲ್‌ನಲ್ಲಿ ಈ ಸಿನಿಮಾ ತೆರೆಕಾಣಲಿದೆ.

ನಟ, ನಿರ್ದೇಶಕ ಉಪೇಂದ್ರ ಅವರು ‘ಹುಷಾರ್’ ಚಿತ್ರದ ಹಾಡೊಂದಕ್ಕೆ ದನಿಯಾಗಿದ್ದಾರೆ. ಚಿತ್ರದ ನಿರ್ದೇಶಕ ಸತೀಶ್ ರಾಜ್ ಅವರು ರಚಿಸಿರುವ ಹಾಡನ್ನು ಸಾಧುಕೋಕಿಲ ಅವರ ಸ್ಟುಡಿಯೋದಲ್ಲಿ ಹಾಡಿದರು. ರಂಗಭೂಮಿ ಹಿನ್ನೆಲೆಯ ಸತೀಶ್ ರಾಜ್ ಅವರಿಗೆ ಇದು ಚೊಚ್ಚಲ ನಿರ್ದೇಶನದ ಚಿತ್ರ. “ನಮ್ಮ ಜೀವನದಲ್ಲಿ ಕೆಲವು ಅನಿರೀಕ್ಷಿತ ತಿರುವುಗಳು ಬರುತ್ತದೆ. ಅದಕ್ಕೆ ಯಾರೂ ಹೊಣೆಗಾರರಲ್ಲ. ನಾವು ಎಚ್ಚರಿಕೆಯಿಂದ ಇರಬೇಕು ಎನ್ನುವ ಎಳೆಯ ಸುತ್ತ ಕತೆ ಮಾಡಿದ್ದೇವೆ” ಎನ್ನುತ್ತಾರೆ ನಿರ್ದೇಶಕ ಸತೀಶ್ ರಾಜ್. ಚಿತ್ರೀಕರಣ ಬಹುತೇಕ ಮುಕ್ತಾಯವಾಗಿದೆ. ಈ ಹಾಡಿನ ಚಿತ್ರೀಕರಣ ಬಾಕಿ ಇದ್ದು, ಸದ್ಯದಲ್ಲೇ ಈ ಹಾಡಿನ ಚಿತ್ರೀಕರಣ ನಡೆಯಲಿದೆ.

ಸತೀಶ್ ರಾಜ್ ಮೂವೀ ಮೇಕರ್ಸ್ ಲಾಂಛನದಲ್ಲಿ ಸತೀಶ್ ರಾಜ್ ಈ ಸಿನಿಮಾ ನಿರ್ಮಾಣ ಮಾಡಿದ್ದಾರೆ. ಅಶ್ವಿನ್ ಅರುಣ್ ಕೃಷ್ಣ ಈ ಚಿತ್ರದ ಸಹ ನಿರ್ಮಾಪಕರು.
ಕಥೆ, ಚಿತ್ರಕಥೆ, ಸಂಭಾಷಣೆ, ಗೀತರಚನೆ ಜೊತೆ ನಿರ್ದೇಶನದ ಹೊಣೆ ಹೊತ್ತಿದ್ದಾರೆ ಸತೀಶ್ ರಾಜ್. ಎರಡು ಹಾಡುಗಳಿರುವ ಚಿತ್ರಕ್ಕೆ ಎ.ಟಿ.ರವೀಶ್ ಮತ್ತು ನಾಗು ಸಂಗೀತ ನೀಡಿದ್ದಾರೆ. ರೆಮೋ ಹಾಗೂ ಉಪೇಂದ್ರ ಒಂದೊಂದು ಹಾಡು ಹಾಡಿದ್ದಾರೆ. ನವೀನ್ ಮತ್ತು ನಾಗರಾಜ್ ಛಾಯಾಗ್ರಹಣ, ಜೆ.ಜೆ.ಶರ್ಮ ಸಂಕಲನ, ಚಂದ್ರು ಬಂಡೆ, ಜಾಗ್ವರ್ ಸಣ್ಣಪ್ಪ ಸಾಹಸ ನಿರ್ದೇಶನ ಹಾಗೂ ಸ್ಟಾರ್ ನಾಗಿ ನೃತ್ಯ ನಿರ್ದೇಶನ ಚಿತ್ರಕ್ಕಿದೆ. ಸಿದ್ದೇಶ್ ನಾಯಕನಾಗಿ ನಟಿಸಿರುವ ಚಿತ್ರದ ನಾಯಕಿ ಪ್ರಿಯದರ್ಶಿನಿ. ನಿರ್ದೇಶಕ ಸತೀಶ್ ರಾಜ್ ಚಿತ್ರದ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಏಪ್ರಿಲ್‌ನಲ್ಲಿ ಸಿನಿಮಾ ತೆರೆಕಾಣಲಿದೆ.

Previous articleRGV ಶಿಷ್ಯ ಕಿಶೋರ್‌ ಭಾರ್ಗವ್‌ ಸಿನಿಮಾ ‘ಸ್ಟಾಕರ್’ ಮಾರ್ಚ್‌ 31ಕ್ಕೆ
Next articleಟ್ರೈಲರ್‌ | ಮಾರ್ಚ್‌ 25ರಿಂದ ಪ್ರೈಮ್‌ನಲ್ಲಿ ಅಕ್ಷರಾ ಹಾಸನ್‌ ಸಿನಿಮಾ

LEAVE A REPLY

Connect with

Please enter your comment!
Please enter your name here