ಅರುಣ್‌ ಅಮುಕ್ತ ನಿರ್ದೇಶನದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಸಿನಿಮಾ ಇದೇ ಜುಲೈ 19ರಂದು ತೆರೆಗೆ ಬರುತ್ತಿದೆ. ಇದಕ್ಕೆ ಮುನ್ನ ಜುಲೈ 14ರಂದು ದುಬೈನಲ್ಲಿ ಸಿನಿಮಾದ ಪ್ರೀಮಿಯರ್‌ ಶೋ ಆಯೋಜನೆಗೊಂಡಿದೆ. Rapper ಚಂದನ್‌ ಶೆಟ್ಟಿ ಸಿನಿಮಾದ ಪ್ರಮುಖ ಪಾತ್ರದಲ್ಲಿ ನಟಿಸಿದ್ದು, ಯುವ ನಟ – ನಟಿಯರು ಅವರಿಗೆ ಜೊತೆಯಾಗಿದ್ದಾರೆ.

‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಸಿನಿಮಾದ ಬಿಡುಗಡೆಗೆ ಕ್ಷಣಗಣನೆ ಶುರುವಾಗಿದೆ. Rapper ಚಂದನ್‌ ಶೆಟ್ಟಿ ಪ್ರಮುಖ ಪಾತ್ರದಲ್ಲಿ ನಟಿಸಿರುವ ಈ ಚಿತ್ರದ ಇತರೆ ಪಾತ್ರಗಳಲ್ಲಿ ಯುವ ತಾರೆಯರ ದಂಡೇ ಇದೆ. ಯುವ ಪೀಳಿಗೆಯನ್ನು ಗಮನದಲ್ಲಿಟ್ಟುಕೊಂಡು ಹೆಣೆದಿರುವ ಯೂಥ್‌ಫೂಲ್‌ ಕತೆಯಿದು ಎನ್ನುತ್ತಾರೆ ಚಿತ್ರದ ನಿರ್ದೇಶಕ ಅರುಣ್‌ ಅಮುಕ್ತ. ‘ಸದ್ಯದ ಮಟ್ಟಿಗೆ ಎಲ್ಲವೂ ಪಾಸಿಟಿವ್ ಆಗಿದೆ. ನಮ್ಮ ಯೂಥ್‌ಫುಲ್‌ ಕಂಟೆಂಟ್‌ ಮೇಲೆ ನಮಗೆ ಅಪಾರ ವಿಶ್ವಾಸವಿದೆ’ ಎನ್ನುವುದು ನಿರ್ದೇಶಕರ ಮಾತು. ಸಿನಿಮಾ ಇದೇ ಜುಲೈ 19ರಂದು ತೆರೆಕಾಣಲಿದೆ. ಇದೇ ದಿನ ನೆರೆಯ ಕೇರಳದಲ್ಲೂ ಸಿನಿಮಾ ತೆರೆಗೆ ಬರಲಿದೆ. ಇದಕ್ಕೂ ಮುನ್ನ ಜುಲೈ 14ರಂದು ದುಬೈನಲ್ಲಿ ಚಿತ್ರದ ಪ್ರೀಮಿಯರ್‌ ಶೋ ಆಯೋಜನೆಗೊಂಡಿದೆ. ಅಲ್ಲಿನ ಪ್ರತಿಷ್ಠಿತ OMG ಕಂಪನಿ ಚಿತ್ರದ ವಿತರಣಾ ಹಕ್ಕುಗಳನ್ನು ಖರೀದಿಸಿದ್ದು, ಬಿಡುಗಡೆಗೆ ಯೋಜನೆ ಹಾಕಿಕೊಂಡಿದೆ.

‘ಸಿನಿಮಾ ಬಗ್ಗೆ ಉತ್ತಮ ಮಾತುಗಳು ಕೇಳಿಬರುತ್ತಿವೆ. ಕೆಲವು ದಿನಗಳಿಂದ ಕನ್ನಡ ಸಿನಿಮಾ ಮಾರುಕಟ್ಟೆ ಬಸವಳಿದಿದೆ. ಇಂತಹ ಸಂದರ್ಭದಲ್ಲಿ ಯೂಥ್‌ಫುಲ್‌ ಕತೆಯುಳ್ಳ ನಮ್ಮ ಸಿನಿಮಾ ಉದ್ಯಮಕ್ಕೆ ಕೊಂಚ ಚೈತನ್ಯ ನೀಡಲಿದೆ ಎಂದು ನಾವು ಭಾವಿಸಿದ್ದೇವೆ. ಕನ್ನಡ ಸಿನಿ ಪ್ರೇಕ್ಷಕರು ನಮ್ಮ ಕೈಹಿಡಿಯಲಿದ್ದಾರೆ’ ಎಂದು ವಿಶ್ವಾಸ ವ್ಯಕ್ತಪಡಿಸುತ್ತಾರೆ ಚಿತ್ರದ ನಿರ್ಮಾಪಕರಾದ ಸುಬ್ರಮಣ್ಯ ಕುಕ್ಕೆ ಮತ್ತು ಎ ಸಿ ಶಿವಲಿಂಗೇಗೌಡ. ಕುಮಾರ್ ಗೌಡ ಛಾಯಾಗ್ರಹಣ, ಭರ್ಜರಿ ಚೇತನ್ ಮತ್ತು ವಾಸುಕಿ ವೈಭವ್ ಸಾಹಿತ್ಯ, ಪವನ್ ಗೌಡ ಸಂಕಲನ, ಟೈಗರ್ ಶಿವು ಹಾಗೂ ನರಸಿಂಹ ಸಾಹಸ ನಿರ್ದೇಶನ ಚಿತ್ರಕ್ಕಿದೆ. ಚಂದನ್ ಶೆಟ್ಟಿ, ಅಮರ್, ಭಾವನಾ, ಮಾನಸಿ, ವಿವಾನ್, ಭವ್ಯ, ಸುನೀಲ್ ಪುರಾಣಿಕ್, ಅರವಿಂದ ರಾವ್, ಸಿಂಚನಾ, ರಘು ರಾಮನಕೊಪ್ಪ ಚಿತ್ರದ ಪ್ರಮುಖ ಪಾತ್ರಗಳಲ್ಲಿ ನಟಿಸಿದಾಸರೆ. ವಿಜೇತ್ ಕೃಷ್ಣ, ವಾಸು ದೀಕ್ಷಿತ್ ಸಂಗೀತ ಸಂಯೋಜಿಸಿದ್ದಾರೆ.

LEAVE A REPLY

Connect with

Please enter your comment!
Please enter your name here