ಸಿದ್ಧ್ರುವ್‌ ಚೊಚ್ಚಲ ನಿರ್ದೇಶನದ ‘ಮರೀಚಿ’ ಸಿನಿಮಾದ ಟೀಸರ್‌ ಬಿಡುಗಡೆಯಾಗಿದೆ. ಇದೊಂದು ಸಸ್ಪೆನ್ಸ್‌ – ಥ್ರಿಲ್ಲರ್‌. ವಿಜಯ ರಾಘವೇಂದ್ರ ಪೊಲೀಸ್‌ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದು ಸೋನು ಗೌಡ ಅವರಿಗೆ ಜೋಡಿಯಾಗಿದ್ದಾರೆ. ಜ್ಯೂಡಾ ಸ್ಯಾಂಡಿ ಸಂಗೀತ ಸಂಯೋಜನೆ ಚಿತ್ರಕ್ಕಿದೆ.

‘God father of good and bad – ಇದು ಚಿತ್ರದ ಟ್ಯಾಗ್‌ಲೈನ್‌. ಚಿತ್ರದ ಕತೆಯೂ ಟ್ಯಾಗ್‌ಲೈನ್‌ನಷ್ಟೇ ಆಸಕ್ತಿಕರವಾಗಿದೆ. ಚಿತ್ರದಲ್ಲಿ ತಾಂತ್ರಿಕ ವರ್ಗದವರನ್ನು ಎಷ್ಟು ಜವಾಬ್ದಾರಿಯಿಂದ ಆಯ್ಕೆ ಮಾಡಿದ್ದರೋ ಅದೇ ರೀತಿ ತೆರೆಮೇಲೆ ಬರುವ ಕಲಾವಿದರನ್ನು ಅಷ್ಟೇ ಜವಾಬ್ದಾರಿಯಿಂದ ಆಯ್ಕೆ ಮಾಡಿದ್ದಾರೆ. ಅದರಲ್ಲಿ ನಾನು ಒಬ್ಬ ಇದ್ದೇನೆ ಎಂದು ಹೇಳಲು ಖುಷಿಯಾಗುತ್ತದೆ’ ಎನ್ನುತ್ತಾರೆ ವಿಜಯ ರಾಘವೇಂದ್ರ. ಅವರು ಮುಖ್ಯಭೂಮಿಕೆಯಲ್ಲಿ ನಟಿಸಿರುವ ‘ಮರೀಚಿ’ ಸಿನಿಮಾದ ಟೀಸರ್‌ ಬಿಡುಗಡೆಯಾಗಿದೆ. ಚಿತ್ರದಲ್ಲಿ ಅವರು ಪೊಲೀಸ್‌ ಅಧಿಕಾರಿ ಪಾತ್ರ ಮಾಡಿದ್ದಾರೆ. ಸೋನು ಗೌಡ ಅವರಿಗೆ ಜೋಡಿ.

ಸಿನಿಮಾಗಳಿಗೆ ಸಹಾಯಕ ನಿರ್ದೇಶಕನಾಗಿ ದುಡಿದು, ಕೆಲವು ಕಿರುಚಿತ್ರಗಳನ್ನು ನಿರ್ದೇಶಿಸಿರುವ ಸಿದ್ಧ್ರುವ್‌ ಅವರಿಗೆ ಇದು ಸ್ವತಂತ್ರ್ಯ ನಿರ್ದೇಶನದ ಮೊದಲ ಸಿನಿಮಾ. ತಮ್ಮ ಸಿನಿಮಾ ಬಗ್ಗೆ ಮಾತನಾಡುವ ಅವರು, ‘ಮರೀಚಿ ಎಂದರೆ ಬ್ರಹ್ಮನ ಮಗ. ನಮ್ಮ ಚಿತ್ರದಲ್ಲಿ ಒಳ್ಳೆಯದು ಕೆಟ್ಟದಕ್ಕೆ ಮರೀಚಿ ಗಾಡ್ ಫಾದರ್ ಎಂದು ತೆಗೆದುಕೊಂಡಿದ್ದೇವೆ’ ಎನ್ನುತ್ತಾರೆ. ನಟಿ ಸೋನು ಗೌಡ ಈ ಹಿಂದೆ ‘ಹ್ಯಾಪಿ ನ್ಯೂ ಯಿಯರ್‌’ ಚಿತ್ರದಲ್ಲಿ ವಿಜಯ ರಾಘವೇಂದ್ರ ಜೋಡಿಯಾಗಿ ನಟಿಸಿದ್ದರು. ಇಲ್ಲಿ ಮತ್ತೊಮ್ಮೆ ಅವರಿಗೆ ಜೊತೆಯಾಗುತ್ತಿದ್ದಾರೆ. ಅಭಿ ದಾಸ್, ಸ್ಪಂದನ ಸೋಮಣ್ಣ, ಆರ್ಯನ್, ಶೃತಿ ಪಾಟೀಲ್, ಗೋಪಾಲ್ ಕೃಷ್ಣ ದೇಶಪಾಂಡೆ, ಅರುಣ ಬಾಲರಾಜ್ ಚಿತ್ರದ ಪ್ರಮುಖ ಪಾತ್ರಗಳಲ್ಲಿದ್ದಾರೆ. ಮನೋಹರ್ ಜೋಶಿ ಛಾಯಾಗ್ರಹಣ, ಜ್ಯೂಡಾ ಸ್ಯಾಂಡಿ ಸಂಗೀತ ಚಿತ್ರಕ್ಕಿದೆ. ಎಸ್ ಎಸ್ ರೆಕ್ ಬ್ಯಾನರ್‌ನ ಅಡಿ ನಿರ್ದೇಶಕ ಸಿದ್ಧ್ರುವ್ ಹಾಗೂ ಸಂತೋಷ್ ಮಾಯಪ್ಪ ಚಿತ್ರವನ್ನು ನಿರ್ಮಿಸಿದ್ದಾರೆ.

LEAVE A REPLY

Connect with

Please enter your comment!
Please enter your name here