ವಸಿಷ್ಠ ಸಿಂಹ ಮತ್ತು ತೇಜಸ್ವಿನಿ ಶರ್ಮ ನಟನೆಯ ‘VIP’ ಸಿನಿಮಾದ ಫಸ್ಟ್‌ಲುಕ್‌ ಪೋಸ್ಟರ್‌ ಬಿಡುಗಡೆಯಾಗಿದೆ. ನಿರ್ಮಲಾನಂದನಾಥ ಸ್ವಾಮೀಜಿ ಪೋಸ್ಟರ್‌ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭಹಾರೈಸಿದ್ದಾರೆ. ಬ್ರಹ್ಮ ನಿರ್ದೇಶನದ ಚಿತ್ರಕ್ಕೆ ಈಗಾಗಲೇ ಎರಡು ಹಂತದ ಚಿತ್ರೀಕರಣ ಪೂರ್ಣಗೊಂಡಿದೆ.

ಆದಿ ಚುಂಚನಗಿರಿ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರು ‘VIP’ ಸಿನಿಮಾದ ಫಸ್ಟ್‌ಲುಕ್‌ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭಹಾರೈಸಿದ್ದಾರೆ. ಬ್ರಹ್ಮ ನಿರ್ದೇಶನದಲ್ಲಿ ವಸಿಷ್ಠ ಸಿಂಹ ನಟಿಸುತ್ತಿರುವ ಚಿತ್ರವಿದು. ಫಸ್ಟ್ ಲುಕ್ ಪೋಸ್ಟರ್‌ನಲ್ಲಿ ಕ್ರಿಕೆಟ್‌ ಬ್ಯಾಟ್‌ ಹಿಡಿದ ವಸಿಷ್ಠ ಇದ್ದಾರೆ. ಮಾಸ್ ಫೀಲ್ ಇರುವಂತಹ ಪೋಸ್ಟರ್ ಕುತೂಹಲ ಮೂಡಿಸಿದೆ. ಚಿತ್ರಕ್ಕೆ ಈಗಾಗಲೇ ಬೆಂಗಳೂರು ಸುತ್ತಮುತ್ತ ಎರಡು ಹಂತಗಳ ಚಿತ್ರೀಕರಣ ನಡೆದಿದೆ. ಈ ಭಾಗದಲ್ಲಿ ಮಾತಿನ‌ ಭಾಗದ ಚಿತ್ರೀಕರಣ ಹಾಗೂ ‘ಕೆಜಿಎಫ್’ ಖ್ಯಾತಿಯ ವಿಕ್ರಂ ಮೋರ್, ‘ಯುವ’ ಖ್ಯಾತಿಯ ಅರ್ಜುನ್ ಅವರ ಸಾಹಸ ನಿರ್ದೇಶನದಲ್ಲಿ ಸಾಹಸ ಸನ್ನಿವೇಶಗಳ ಚಿತ್ರೀಕರಣ ನಡೆದಿದೆ.

ಕಲಾ ಸೃಷ್ಟಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ಆರ್ ಎಸ್ ಮೋಹನ್ ಕುಮಾರ್ ಹಾಗೂ ಆರ್ ಅಚ್ಯುತ್ ರಾವ್ ನಿರ್ಮಾಣದಲ್ಲಿ ಚಿತ್ರ ಅದ್ಧೂರಿಯಾಗಿ ಮೂಡಿ ಬರುತ್ತಿದೆ. ವಿಭಿನ್ನ ಕಥಾಹಂದರ ಹಾಗೂ ಮೇಕಿಂಗ್‌ನಿಂದ ಸದ್ದು ಮಾಡುತ್ತಿರುವ ‘ವಿಐಪಿ’ ಚಿತ್ರದಲ್ಲಿ ವಸಿಷ್ಠ ಸಿಂಹ ಅವರಿಗೆ ನಾಯಕಿಯಾಗಿ ತೇಜಸ್ವಿನಿ ಶರ್ಮ ನಟಿಸುತ್ತಿದ್ದಾರೆ. ಸುನೀಲ್ ಪುರಾಣಿಕ್, ಬಲ ರಾಜವಾಡಿ, ಅಫ್ಜಲ್, ಸ್ಪರ್ಶ ರೇಖಾ, ಸುಚೇಂದ್ರ ಪ್ರಸಾದ್ , ಹನುಮಂತೇಗೌಡ, ರಾಮ್ ಕಶ್ಯಪ್, ರಣವೀರ್ ಚಿತ್ರದ ಇತರೆ ಕಲಾವಿದರು. ರಾಜೀವ್ ಗಣೇಶನ್ ಛಾಯಾಗ್ರಹಣ, ಹರ್ಷವರ್ಧನ್ ರಾಜ್ ಸಂಗೀತ ನಿರ್ದೇಶನ, ಸತೀಶ್ ಚಂದ್ರಯ್ಯ ಸಂಕಲನ ಚಿತ್ರಕ್ಕಿದೆ.

LEAVE A REPLY

Connect with

Please enter your comment!
Please enter your name here