ಲಿಂಗದೇವರು ನಿರ್ದೇಶನದ ‘ವಿರಾಟಪುರ ವಿರಾಗಿ’ ಸಿನಿಮಾ Biffes ಏಷಿಯನ್‌ ವಿಭಾಗದ ಸ್ಪರ್ಧೆಗೆ ಆಯ್ಕೆಯಾಗಿದೆ. ಹಾನಗಲ್ಲ ಕುಮಾರಸ್ವಾಮಿಗಳ ಜೀವನವನ್ನು ಆಧರಿಸಿದ ಚಿತ್ರವಿದು.

ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಬಿ.ಎಸ್.ಲಿಂಗದೇವರು ನಿರ್ದೇಶನದ ‘ವಿರಾಟಪುರ ವಿರಾಗಿ’ ಸಿನಿಮಾ ಮಾರ್ಚ್ 23ರಿಂದ ನಡೆಯುವ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವದ ಏಷಿಯನ್ ವಿಭಾಗದ ಸ್ಪರ್ಧೆಗೆ ಆಯ್ಕೆಯಾಗಿದೆ. ಏಷಿಯನ್ ಸ್ಪರ್ಧೆಯಲ್ಲಿ ಇರಾನ್, ಇಸ್ರೇಲ್‌, ಜಪಾನ್, ಶ್ರೀಲಂಕಾ, ಬಾಂಗ್ಲಾದೇಶ, ಮರಾಠಿ ಸೇರಿದಂತೆ 14 ಸಿನಿಮಾಗಳನ್ನು ಆಯ್ಕೆ ಮಾಡಲಾಗಿದ್ದು, ಈ ಹದಿನಾಲ್ಕು ಸಿನಿಮಾಗಳಲ್ಲಿ ‘ವಿರಾಟಪುರ ವಿರಾಗಿ’ ಸಿನಿಮಾ ಕೂಡ ಒಂದು.

ಹಾನಗಲ್ಲ ಕುಮಾರಸ್ವಾಮಿಗಳ ಜೀವನವನ್ನು ಆಧರಿಸಿದ ಸಿನಿಮಾ ಇದು. ಸತತ ಮೂವತ್ತೈದು ದಿನಗಳಿಂದ ಹಲವು ಕಡೆ ಸಿನಿಮಾ ಪ್ರದರ್ಶನ ಕಾಣುತ್ತಿದೆ. ಕಲಬುರಗಿ ನಗರದಲ್ಲಿ ನೂರು ಪ್ರದರ್ಶನಗಳನ್ನು ಕಂಡದ್ದೊಂದು ದಾಖಲೆ. ಕರ್ನಾಟಕದಾದ್ಯಂತ ಈವರೆಗೂ ಮೂರು ಸಾವಿರಕ್ಕೂ ಹೆಚ್ಚು ಪ್ರದರ್ಶನಗಳನ್ನು ಕಂಡಿದೆ. ಸಿನಿಮಾ ಬಿಡುಗಡೆಗೆ ಮುನ್ನ 75 ಸಾವಿರಕ್ಕೂ ಅಧಿಕ ಟಿಕೆಟ್ ಮಾರಾಟವಾಗಿ ಹೊಸ ದಾಖಲೆ ಬರೆದಿದ್ದ ಚಿತ್ರದ 750ಕ್ಕೂ ಹೆಚ್ಚು ಶೋಗಳು ಹೌಸ್ ಫುಲ್ ಆಗಿವೆ. ಮಣಿಕಾಂತ್ ಕದ್ರಿ ಸಂಗೀತ ಸಂಯೋಜನೆ ಚಿತ್ರಕ್ಕಿದೆ. ಈ ಸಿನಿಮಾವನ್ನು ಜನರಿಗೆ ತಲುಪಿಸುವುದಕ್ಕಾಗಿಯೇ ಹಾನಗಲ್ಲ ಕುಮಾರಸ್ವಾಮಿಗಳ ಭಕ್ತರು ರಥಯಾತ್ರೆ ಮತ್ತು ಗದಗ ಸೇರಿದಂತೆ ಹಲವು ಕಡೆ ಕಾರ್ಯಕ್ರಮಗಳನ್ನು ಆಯೋಜನೆ ಮಾಡಿದ್ದರು.

LEAVE A REPLY

Connect with

Please enter your comment!
Please enter your name here