ಕನ್ನಡ ಚಿತ್ರರಂಗದವರ ಫೇವರೆಟ್ ಶೂಟಿಂಗ್ ಜಾಗಗಳಲ್ಲಿ ಒಂದಾದ ಇನ್ನೋವೇಟಿವ್ ಫಿಲ್ಮ್ ಸಿಟಿ ಇನ್ನು ಮುಂದೆ ಹೊಸ ರೂಪದಲ್ಲಿ, ಹೊಸ ಹೆಸರಿನೊಂದಿಗೆ ಬರಲಿದೆ. ಫೆಬ್ರವರಿಯಲ್ಲಿ ಹೊಸರೂಪದಲ್ಲಿ ಸಿನಿರಂಗಕ್ಕೆ ಅರ್ಪಣೆಯಾಗಲಿದೆ.

ಬಿಡದಿ ಬಳಿಯ ಇನ್ನೋವೇಟಿವ್ ಫಿಲಂ ಸಿಟಿಯನ್ನು ಚೆನ್ನೈನ ಖ್ಯಾತ ನಿರ್ಮಾಪಕ, ನಟ ಹಾಗೂ ಉದ್ಯಮಿ ವೇಲ್ಸ್ ಗ್ರೂಪ್ ಮುಖ್ಯಸ್ಥ ಡಾ. ಐಸಿರಿ ಕೆ. ಗಣೇಶ್ ಖರೀದಿಸಿದ್ದಾರೆ‌. ಇನ್ನು ಮುಂದೆ ವೇಲ್ಸ್‌ ಇನ್ನೋವೇಟಿವ್ ಫಿಲಂ ಸಿಟಿ ಎಂದು ಕರೆಯಲಾಗುವುದೆಂದು ವೇಲ್ಸ್ ಇನ್ನೋವೇಟಿವ್ ಫಿಲಂ ಸಿಟಿಯ ಮ್ಯಾನೇಜರ್ ಬಶೀರ್ ಅಹ್ಮದ್ ತಿಳಿಸಿದ್ದಾರೆ‌. ಕರ್ನಾಟಕದ ಮೇಲೆ ಅಪಾರ ಪ್ರೀತಿ ಹೊಂದಿರುವ ಗಣೇಶ್ ಈ ಜಾಗವನ್ನು ಖರೀದಿಸಿದ್ದಾರೆ ಎಂದು ಬಷೀರ್ ವಿವರಣೆ ಕೊಟ್ಟಿದ್ದಾರೆ. “ಮೈ ಮೂವೀ ಬಜಾರ್ ಹಾಗೂ ಶ್ರೇಯಸ್‌ ಮೀಡಿಯಾ ಮುಖ್ಯಸ್ಥ ನವರಸನ್ ನಾನು ಚೆನ್ನೈಗೆ ಹೋದಾಗಲೆಲ್ಲಾ ಗಣೇಶ್ ಸರ್ ಅವರನ್ನು ಭೇಟಿ ಮಾಡುತ್ತಿರುತ್ತೇನೆ. ಅವರು ತಮಿಳಿನಲ್ಲಿ ಸುಮಾರು 20ಕ್ಕೂ ಹೆಚ್ಚು ಸಿನಿಮಾಗಳನ್ನು ನಿರ್ಮಿಸಿದ್ದಾರೆ. ಕೆಲವು ಚಿತ್ರಗಳಲ್ಲಿ ನಟಿಸಿದ್ದಾರೆ. ಈಗ ಇನ್ನೋವೇಟಿವ್ ಫಿಲಂ ಸಿಟಿಗೆ ನೂತನ ಕಾಯಕಲ್ಪ ನೀಡಲು ಸಜ್ಜಾಗಿದ್ದಾರೆ ಎಂದು ತಮ್ಮ ಖುಷಿ ಹಂಚಿಕೊಂಡಿದ್ದಾರೆ.

“ಸದ್ಯಕ್ಕೆ ಇನ್ನೋವೇಟಿವ್ ಫಿಲಂ ಸಿಟಿಗೆ ಸಾರ್ವಜನಿಕ ಪ್ರವೇಶ ನಿಷೇಧಿಸಲಾಗಿದೆ. ಮುಂದಿನ ಕೆಲ ದಿನಗಳಲ್ಲಿ ನವೀಕರಣದೊಂದಿಗೆ ಕಾರ್ಯಾರಂಭ ಮಾಡಲಿದೆ. ಫೆಬ್ರವರಿ ಅಂತ್ಯದ ವೇಳೆಗೆ ನೀವು ಈ ಫಿಲಂ ಸಿಟಿಯನ್ನು ಹೊಸರೂಪದಲ್ಲಿ ನೋಡಬಹುದು. ಇಲ್ಲಿ, ರೈಲ್ವೇ ನಿಲ್ದಾಣ ಸೇರಿದಂತೆ ಹಲವು ಬಗ್ಗೆಯ ಸೆಟ್‌ಗಳನ್ನು ನಿರ್ಮಿಸಲಾಗುತ್ತಿದೆ. ಇನ್ನು ಮುಂದೆ ಕನ್ನಡ ಸಿನಿಮಾ ಚಿತ್ರೀಕರಣಕ್ಕೆ ಬೇರೆ ರಾಜ್ಯಗಳಿಗೆ ಹೋಗುವ ಸಂದರ್ಭ ಬರುವುದಿಲ್ಲ. ಅಲ್ಲಿ ಸಿಗುವ ಎಲ್ಲಾ ಸೌಲಭ್ಯಗಳು ಈ ಫಿಲಂ ಸಿಟಿಯಲ್ಲಿ ಸಿಗಲಿವೆ. ಚಿತ್ರದ ಮುಹೂರ್ತ ಸಮಾರಂಭದ ದಿನ ನಿರ್ಮಾಪಕರಿಂದ ಯಾವುದೇ ಹಣ ಪಡೆಯದೆ ಉಚಿತವಾಗಿ ಜಾಗ ನೀಡಬೇಕೆಂದು ತೀರ್ಮಾನವಾಗಿದೆ. ನಮ್ಮ ಸಂಸ್ಥೆ ವೇಲ್ಸ್ ಫಿಲಂ ಸಿಟಿಯೊಂದಿಗೆ ವರ್ಕಿಂಗ್ ಪಾರ್ಟ್ನರ್ ಆಗಿ ಕಾರ್ಯನಿರ್ವಹಿಸಲಿದೆ. ಇನ್ನೂ ನಮ್ಮ ಮೈ ಮೂವೀ ಬಜಾರ್ ಆಪ್ ಸಹ ಸಿದ್ದವಾಗುತ್ತಿದ್ದು, ಇದು ಸಹ ಚಿತ್ರರಂಗದ ಎಲ್ಲಾ ನಿರ್ಮಾಪಕರಿಗೆ ಅನುಕೂಲವಾಗಿರಲಿದೆ” ಎನ್ನುತ್ತಾರೆ ನವರಸನ್.

LEAVE A REPLY

Connect with

Please enter your comment!
Please enter your name here