ಯುವ ರಾಜಕುಮಾರ್‌ ಬೆಳ್ಳಿತೆರೆಗೆ ಪದಾರ್ಪಣೆ ಮಾಡುತ್ತಿರುವ ‘ಯುವ’ ಸಿನಿಮಾದ ಆಡಿಯೋ ಹಕ್ಕುಗಳನ್ನು ಆನಂದ್‌ ಆಡಿಯೋ ಖರೀದಿಸಿದೆ. ಈ ವರ್ಷದ ಬಹುನಿರೀಕ್ಷಿತ ಚಿತ್ರಗಳಲ್ಲೊಂದು ‘ಯುವ’. ಸಂತೋಷ್‌ ಆನಂದರಾಮ್‌ ನಿರ್ದೇಶನದ ಈ ಸಿನಿಮಾದ ನಾಯಕಿಯಾಗಿ ಸಪ್ತಮಿ ಗೌಡ ನಟಿಸಿದ್ದಾರೆ.

‘KGF’, ‘ಕಾಂತಾರ’ ಸಿನಿಮಾಗಳನ್ನು ನಿರ್ಮಿಸಿದ ಹೊಂಬಾಳೆ ಫಿಲಂಸ್‌ ಅವರ ಬಹುನಿರೀಕ್ಷಿತ ಸಿನಿಮಾ ‘ಯುವ’ ಬಿಡುಗಡೆ ದಿನಾಂಕ ಹತ್ತಿರವಾಗುತ್ತಿದೆ. ಡಾ ರಾಜಕುಮಾರ್‌ ಮೊಮ್ಮಗ ಯುವ ರಾಜಕುಮಾರ್‌ ಬೆಳ್ಳಿತೆರೆಗೆ ಪರಿಚಯವಾಗುತ್ತಿರುವ ಚಿತ್ರವಿದು. ಆರಂಭದಿಂದಲೂ ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿರುವ ಈ ಚಿತ್ರವನ್ನು ಸಂತೋಷ್ ಆನಂದರಾಮ್ ನಿರ್ದೇಶಿಸಿದ್ದಾರೆ. ಇತ್ತೀಚೆಗಷ್ಟೇ ‘ಯುವ’ ಚಿತ್ರೀಕರಣ ಪೂರ್ಣವಾಗಿದ್ದು, ಮಾರ್ಚ್ 29ರಂದು ಸಿನಿಮಾ ತೆರೆಕಾಣಲಿದೆ. ಅಜನೀಶ್ ಲೋಕನಾಥ್ ಸಂಗೀತ ಸಂಯೋಜಿಸಿದ್ದಾರೆ. ಕನ್ನಡದ ಹೆಸರಾಂತ ಆಡಿಯೋ ಸಂಸ್ಥೆ ಆನಂದ್ ಆಡಿಯೋ ಚಿತ್ರದ ಆಡಿಯೋ ಹಕ್ಕುಗಳನ್ನು ಪಡೆದುಕೊಂಡಿದೆ. ಫಸ್ಟ್ ಲುಕ್ ಪೋಸ್ಟರ್‌ನಿಂದ ಜನರ ಗಮನ ಸೆಳೆದಿರುವ ‘ಯುವ’ ಚಿತ್ರದ ಹಾಡುಗಳು ಮಾರ್ಚ್ ಮೊದಲ ವಾರದಲ್ಲಿ ಅದ್ಧೂರಿಯಾಗಿ ಬಿಡುಗಡೆಯಾಗಲಿವೆ. ಟೀಸರ್ ಹಾಗೂ ಟ್ರೇಲರ್ ಸಹ ಸದ್ಯದಲ್ಲೇ ರಿಲೀಸ್ ಆಗಲಿದೆ. ಯುವಗೆ ನಾಯಕಿಯಾಗಿ ‘ಕಾಂತಾರ’ ಖ್ಯಾತಿಯ ಸಪ್ತಮಿ ಗೌಡ ನಟಿಸಿದ್ದಾರೆ. ಅಚ್ಯುತ್‌ ಕುಮಾರ್, ಸುಧಾರಾಣಿ, ಕಿಶೋರ್ ಚಿತ್ರದ ಇತರೆ ಪ್ರಮುಖ ಕಲಾವಿದರು. ಶ್ರೀಶ ಕುದುವಳ್ಳಿ ಚಿತ್ರದ ಛಾಯಾಗ್ರಾಹಕರು.

LEAVE A REPLY

Connect with

Please enter your comment!
Please enter your name here